32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಉಜಿರೆ : ಮೇ 27ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2023-24 ರ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದ್ದು, ಫಲಿತಾಂಶದ ಬೆನ್ನೆಲುಬಾದ ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಗುರುತಿಸಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ. ಎಸ್ ಶುಭನುಡಿಗಳನ್ನಾಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದಿದ್ದ ಅಟಲ್ ಟಿಂಕರಿಂಗ್ ಲ್ಯಾಬ್ ಮ್ಯಾರಥಾನ್ ನಲ್ಲಿ ಭಾಗವಹಿಸಿ, ಅತ್ಯುತ್ತಮ 100 ತಂಡಗಳ ಪೈಕಿ ಆಯ್ಕೆ ಆಗಿರುವ ವಿದ್ಯಾರ್ಥಿ ಸೋಹನ್ ಶೆಟ್ಟಿ ಹಾಗೂ ಪವನ್ ಕೃಷ್ಣ ಇವರಿಂದ ತಮ್ಮ ಯೋಜನೆ ‘ಸ್ಮಾರ್ಟ್ ಸೋಲಾರ್ ಟ್ರಾಕರ್’ ಪ್ರಸ್ತುತಿಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶ್ರೀಮತಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ನಯನ ವಂದಿಸಿದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!