24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುಕ್ಕೇಡಿ: ವಿದ್ಯೆಯ ಜೊತೆ ಜೊತೆಗೆ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಸಾಧನೆಯನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆಯನ್ನು ನೀಡುತ್ತಾ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು.

ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ್ ರಾವ್ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಮೇ 26ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ ವೈ ರವಿಕುಮಾರ್ ಮಂಜನಕ್ಕಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕಾರ್ಯದರ್ಶಿ ತನಿಯಪ್ಪ ರಾಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 85 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

2023-24ನೇ ಸಾಲಿನ SSLC ಯಲ್ಲಿ 90% ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಕು.ವೈಷ್ಣವಿ ಎನ್ ಶೇಟ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಮಾಜಿ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಸೋಮನಾಥ ಕೆ ವಿ ವಂದಿಸಿದರು.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
error: Content is protected !!