ಕುಕ್ಕೇಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಸಂಘದ ಸದಸ್ಯರ ಮಕ್ಕಳಿಗೆ ಕೊಡುವ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಈ ವರ್ಷವೂ ಸಂಘದ ಗೌರವಾಧ್ಯಕ್ಷ ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು.
ಸಭೆಯಲ್ಲಿ ಸಂಘದ ಗೌರವ ಅಧ್ಯಕ್ಷ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಮಹಾಪೋಷಕ ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದು ಮಕ್ಕಳು ಇದರ ಸದುಪಯೋಗ ಪಡೆದು ಮುಂದೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದು ಕೀರ್ತಿವಂತರಾಗಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿ ಎಂಬ ಕಿವಿ ಮಾತು ಹೇಳಿ ಸಭೆಯ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವೇಣೂರು ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ ಕಂಗಿತ್ತಿಲು ಮಾತನಾಡಿ ಕೋಟಿ ಚೆನ್ನಯ್ಯ ಸೇವಾ ಸಂಘ ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು. ಕುಕ್ಕೇಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಮಾತನಾಡಿ ಅಲ್ಪಾವಧಿಯಲ್ಲಿ ಅತಿ ಹೆಚ್ಚು ಸಮಾಜಮುಖಿ ಕೆಲಸ ಕಾರ್ಯಗಳಿಂದ ಸಮಾಜಕ್ಕೆ ಮಾದರಿಯಾಗಿರುವ ಈ ಸಂಘ ಇನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್ ಅಂಕರ್ಜಾಲು ಮಾತನಾಡಿ ನಮ್ಮ ಸಂಘಟನೆ ನಾರಾಯಣ ಗುರುಗಳ ತತ್ವ ಸಿದ್ದಾಂತದಂತೆ ಮುನ್ನಡೆಯುತ್ತಿದ್ದು ಈವರೆಗೆ ಸಮಾಜಕ್ಕೆ ಪೂರಕವಾಗಿ ಕೆಲಸಕಾರ್ಯಗಳನ್ನು ಮಾಡಿರುತ್ತೇವೆ ವಿದ್ಯೆಗೆ ಪ್ರೋತ್ಸಾಹ ನೀಡಬೇಕು ಸಂಘಟನೆಯನ್ನು ಗಟ್ಟಿಗೊಳಿಸಿ ಮುಂದಿನ ದಿನಗಳಲ್ಲಿ ಹತ್ತು ಹಲವಾರು ಯೋಚನೆ ಮತ್ತು ಯೋಜನೆ ಮೂಲಕ ಇನಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವ ಉದ್ದೇಶ ನಮ್ಮದಾಗಿದೆ. ಪುಸ್ತಕ ಪಡೆದ ಮಕ್ಕಳು ಮುಂದಿನ ನಿಮ್ಮ ಭವಿಷ್ಯ ಉಜ್ಜಲವಾಗಿರಲಿ ಹಾರೈಸಿ, ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಸಹಕಾರ ನೀಡಿದ ಎಲ್ಲಾ ಸದಸ್ಯರಿಗೆ ಅಭಿನಂದಿಸಿದರು.
ವೇದಿಕೆಯಲ್ಲಿ ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ದಿವಾಕರ ಪೂಜಾರಿ ಉಪಸ್ಥಿತರಿದ್ದರು.
ಯಶಲತಾ ಅಮ್ಮಾಜಿ ಪೂಜಾರಿ ಮಕ್ಕಳಿಗೆ ಮನೋರಂಜನೆಗಾಗಿ ಹಲವಾರು ಚುಟುಕು ಸ್ಪರ್ಧೆಗಳನ್ನು ನಡೆಸಿಕೊಟ್ಟರು ಸಂಘದ ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು.
ಕುಮಾರಿ ಅಮೂಲ್ಯ ಅನನ್ಯ ಪ್ರಾರ್ಥಿಸಿ, ಕಾರ್ಯಕ್ರಮದಲ್ಲಿ ನವೀನ್ ಜಿ ಬುಲೆಕ್ಕರ ನಿರೂಪಿಸಿದರು. ಸಂಘದ ಕಾರ್ಯದರ್ಶಿ ರವಿ ಉಳ್ತುರು ಧನ್ಯವಾದವಿತ್ತರು.