April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು,ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಪ್ರಮೀಳಾರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!