37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ‌ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ವಿಚಾರವನ್ನು ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್ ಐ ಆರ್ ದಾಖಲಾಗಿತ್ತು.


ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈ ಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ‌ ಅವರು ನಿಯೋಜಿಸಿದ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು, ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Related posts

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!