April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ಸಹಾಯಾರ್ಥವಾಗಿ ರೂ.20,000/-ದ ಚೆಕ್ ನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ನಿರ್ದೇಶಕ ಆನಂದ ಗೌಡ ಉಜಿರೆ ಇವರ ಮೂಲಕ ಫಲಾನುಭವಿಯ ಪತ್ನಿಗೆ ಹಸ್ತಾಂತರ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕ ಮೋಹನ ಗೌಡ ಕೊಯ್ಯೂರು, ಸೀತಾರಾಮ್ ಸೌರಭ ಬೆಳಾಲು, ವಾಣಿ ಸೌಹಾರ್ದ- ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಮೀನಾಕ್ಷಿ ಮಹಾಬಲ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya
error: Content is protected !!