23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ‌ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ವಿಚಾರವನ್ನು ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್ ಐ ಆರ್ ದಾಖಲಾಗಿತ್ತು.


ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈ ಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ‌ ಅವರು ನಿಯೋಜಿಸಿದ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು, ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Related posts

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya
error: Content is protected !!