April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. 1998ರಲ್ಲಿ ಬೆಳ್ತಂಗಡಿಗೆ ವರ್ಗವಣೆಗೊಂಡರು. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದ ಚಿದಾನಂದ ಹೂಗಾರ್ ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಪ್ರಭಾರ ತಾಂತ್ರಿಕ ಅಧಿಕಾರಿ, ಕೊಕ್ಕಡ-ವೇಣೂರು ರೈತ ಸಂಪರ್ಕ ಕೇಂದ್ರ ಹಾಗೂ ಬೀಜೋತ್ಪನ್ನ ಕೇಂದ್ರದಲ್ಲಿ ಸೇವೆಗೈದಿದ್ದಾರೆ.

ಪ್ರಸುತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ವಿಜಯಪುರದವರು. ಪತ್ನಿ ಪಾರ್ವತಿ, ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್ ಜೊತೆ ಧರ್ಮಸ್ಥಳದಲ್ಲಿ ವಾಸ್ತ್ಯವಿದ್ದಾರೆ.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!