32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಚರು ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಉಮ್ಮರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷರಾದ ಉಮ್ಮರ್ ರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ದಿವ್ಯಜ್ಯೋತಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು,ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಹರಿಣಾಕ್ಷಿಯವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಒಕ್ಕೂಟದ ಕಾರ್ಯದರ್ಶಿಯವರು ಮಂಡಿಸಿದರು, ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ ರವರು ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಮೋಹಿನಿರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya
error: Content is protected !!