27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya
error: Content is protected !!