September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

ಚಾರ್ಮಾಡಿ : ಚಿಕ್ಕಮಗಳೂರು ವಿಭಾಗದ ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಬಸ್ ಡಿಕ್ಕಿಯಾದ ಸ್ಥಳದಲ್ಲಿ ಆಳವಾದ ಕಂದಕವಿದ್ದು, ಪ್ರಯಾಣಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ತಡೆಗೋಡೆಗೆ ಹಾನಿ ಉಂಟಾಗಿದ್ದು ತಡೆಗೋಡೆ ಕುಸಿದು ಬಿದ್ದಿದೆ. ಈ ಸ್ಥಳದಲ್ಲಿ ಬಣಕಲ್ ಪೊಲೀಸರು ತಾತ್ಕಾಲಿಕವಾಗಿ ಬ್ಯಾರಿಕೇಡ್ ಅಳವಡಿಸಿದ್ದಾರೆ .


ಬಸ್-ಕಾರು ಅಪಘಾತ:
ಚಾರ್ಮಾಡಿ ಘಾಟಿ ಹತ್ತನೇ ತಿರುವಿನ ಸಮೀಪ ಉಡುಪಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಶಿವಮೊಗ್ಗ ಕಡೆ ಸಾಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಘಾಟಿ ಪರಿಸರದಲ್ಲಿ ಮಂಜು ಕವಿದ ವಾತಾವರಣ ಹಾಗೂ ಮಳೆ ಇದ್ದು ರಸ್ತೆ, ರಸ್ತೆ ಬದಿ ಗಮನಕ್ಕೆ ಬರದೆ ಅಪಘಾತಗಳು ಉಂಟಾಗುತ್ತಿವೆ. ಚಾಲಕರು ಹೆಚ್ಚಿನ ಎಚ್ಚರಿಕೆ ವಹಿಸಿ ವಾಹನಗಳನ್ನು ಚಲಾಯಿಸಬೇಕಾದ ಅಗತ್ಯವಿದೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!