ಬೆಳ್ತಂಗಡಿ: ಪಡಂಗಡಿ ಗ್ರಾಮದ ಇತಿಹಾಸ ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ಉದಯ ಪಾಂಗಾಣ್ಣಯರ ನೇತೃತ್ವದಲ್ಲಿ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೇ 30ರಂದು ನಡೆಯಿತು .


ಮೇ 29 ರಂದು ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ ನಡೆಯಿತು. ಮೇ 30ರಂದು ಕಲಶಾಧಿವಾಸ, ಅಧಿವಾಸ ಹೋಮ, ಚಂಡಿಕಾಯಾಗ ಮಹಾಪೂಜೆ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಪಧಾದಿಕಾರಿಗಳು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಪಡಂಗಡಿ, ಕುವೆಟ್ಟು, ಸೊಣಂದೂರು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.











