23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಒಕ್ಕೂಟದ ನೂತನ ಅಧ್ಯಕ್ಷರಾದ ತ್ರೇಸ್ಯ ಎಂ.ವಿ ದೀಪ ಪ್ರಜ್ವಲಿಸಿ ಒಕ್ಕೂಟದ ಸಭೆಯನ್ನು ಉದ್ಘಾಟಿಸಿದರು..

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಭಾಗ್ಯಶ್ರಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀರವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಸುಮಂತ್ ರವರು ಮಂಡಿಸಿದರು, ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯ ಮೇಲ್ವಿಚಾರಕರಾದ ಹರೀಶ್ ರವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯರವರು ಉಪಸ್ಥಿತರಿದ್ದರು. ಸುಮಂತ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!