April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

ವೇಣೂರು: ಮೇಸ್ತಿ ಕೆಲಸ ನಿರ್ವಹಿಸುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮೂಡಬಿದ್ರೆಯಲ್ಲಿ ಇಂದು ನಡೆದಿದೆ.

ಮೃತ ಯುವಕನನ್ನು ವೇಣೂರು ಕುಕ್ಕೇಡಿ ಸಮೀಪದ ಕರ್ತ್ಯಾರ್ ಮನೆಯ ಸುರೇಶ್ ಕುಲಾಲ್ (32ವ) ಎಂದು ಗುರುತಿಸಲಾಗಿದೆ. ಕೆಲವು ಸಮಯದಿಂದ ಮೇಸ್ತ್ರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಇತ್ತಿಚೇಗೆ ಮೂಡಬಿದ್ರೆಯಲ್ಲಿ ಶಾಲೆಯೊಂದರ ಕೆಲಸದಲ್ಲಿ ನಿರತರಾಗಿದ್ದರೂ. ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಕಲ್ಲಿನ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಈ ಸಂಭಂಧ ಮೂಡಬಿದ್ರೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಸಹೋದರ,ಸಹೋದರಿಯರು, ಕುಟುಂಬಸ್ಥರು ಹಾಗೂ ಮಿತ್ರರನ್ನು ಆಗಲಿದ್ದಾರೆ.

Related posts

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!