September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಇದರ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವು ಮೇ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರು ರಾಜರ್ಷಿ ಪದ್ಮಭೂಷಣ ಡಾ.ವೀರೇಂದ್ರ ಹೆಗ್ಗಡೆಯವರು
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಗೌರವಾಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಮಕ್ಕಳ ಹೃದ್ರೋಗ ತಜ್ಞೆ ಡಾ।। ವಿಜಯಲಕ್ಷ್ಮಿ ಬಾಳೇಕುಂದ್ರಿ, ಬೆಂಗಳೂರಿನ ಖ್ಯಾತ ಚಿತ್ರನಟಿ ಶ್ರೀಮತಿ ಪದ್ಮಜಾ ರಾವ್‌ ಭಾಗವಹಿಸಿದ್ದರು. ಸಮಾರಂಭದಲ್ಲಿ ರಜತ ಸಂಚಿಕೆ ಲೋಕಾರ್ಪಣೆಯನ್ನು ನೆರವೇರಿಸಿದರು.
ಸಮಾರಂಭದಲ್ಲಿ ಶ್ರೀಮತಿ ಸುಮನ್ ಪತ್ರಾವಳಿ ಬೆಳಗಾವಿ, ಶ್ರೀಮತಿ ವೀಣಾ ಶೆಟ್ಟಿ ಮೂಡುಬಿದಿರೆ, ಶ್ರೀಮತಿ ಸುಶೀಮಾ ಯಶವಂತ್ ಬೆಂಗಳೂರು, ಶ್ರೀಮತಿ ಛಾಯಾ ಹುಣಸೂರು, ಕುಮಾರಿ ಅನನ್ಯ, ಮೈಸೂರು ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳದ ಡಿ. ಹರ್ಷೆಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಕೇಸರಿ ರತ್ನರಾಜ್, ಶೀಲಾ ಅನಂತರಾಜ್
ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ನಿರ್ದೇಶಕರು , ಸದಸ್ಯರು ಉಪಸ್ಥಿತರಿದ್ದರು.

ಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚ್ಚಶ್ರೀಮತಿ ಪದ್ಮನಿ ಪದ್ಮರಾಜ್‌ ಸ್ವಾಗತಿಸಿದರು, ವೈಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮುದಾ ನಾಗಭೂಷಣ್‌ ನಿರೂಪಿಸಿದರು.

Related posts

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya
error: Content is protected !!