ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮವು ಮೇ 30ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಶಶಿಧರ ಎಂ. ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವೃತ್ತ ಕಾರ್ಮಿಕ ನಿರೀಕ್ಷಕ ಹರೀಶ್ ಎಸ್ ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರು ಶಿವಕುಮಾರ್ ಎಸ್. ಎಂ ರವರು ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಕುರಿತು ಕಾನೂನು ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾ.ಕಾ. ಸೇ.ಸ. ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ನ್ಯಾಯಾಲಯ ಜೆ. ಎಂ.ಎಫ್.ಸಿ. ವಿಜಯೇಂದ್ರ ಟಿ.ಹೆಚ್., ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ., ಸ್ಪಂದನ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ನಡ ಉಪಸ್ಥಿತರಿದ್ದರು.

Leave a Comment

error: Content is protected !!