ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಗ್ರಾಮಸ್ಥರಾದ ಮುತ್ತಯ್ಯ ಪೂಜಾರಿ ದಂಪತಿಗಳ ೬೦ನೇ ವರ್ಷದ ವೈವಾಹಿಕ ಜೀವನದ ಸವಿನೆನಪಿಗಾಗಿ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಸಮವಸ್ತ್ರವನ್ನು ವಿತರಿಸಿದ ಶಾಲಾ ಹಳೆ ವಿದ್ಯಾರ್ಥಿ ಶಿವರಾಜ್ ಸನ್ಮಾನಿಸಲಾಯಿತು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಈ ವರ್ಷದ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮಕ್ಕಳನ್ನು ಮರಳಿ ಶಾಲೆಗೆ ಬರುವಂತೆ ಮನವೊಲಿಸಲು ಪೋಷಕರಿಗೆ ವಿನಂತಿಸಿದರು. ಶಾಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ವೇತ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಪೋಷಕರು ಭಾಗವಹಿಸಿದ್ದರು.

ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಸ್ವಾಗತಿಸಿದರು. ಈ ವರ್ಷದ ಶಿಕ್ಷಣ ಕಾರ್ಯಕ್ರಮಗಳ ಬಗ್ಗೆ ಅಧ್ಯಾಪಕಿ ರೂಪ ವಿವರಿಸಿದರು. ಶಿಕ್ಷಕ ರಾಜ ವಂದಿಸಿದರು.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!