September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

ಧರ್ಮಸ್ಥಳ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ವೃತ್ತಿಯಿಂದ ನಿವೃತ್ತರಾಗಲಿರುವ ಡಾ. ಎಲ್ ಎಚ್ ಮಂಜುನಾಥರವರನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನವನ್ನು ನೆರವೇರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥರು ಮಾತನಾಡುತ್ತಾ, ಡಾ. ಎಲ್ ಎಚ್ ಮಂಜುನಾಥರವರು ಓರ್ವ ಉತ್ತಮ ಓದುಗರೂ ಬರಹಗಾರರೂ ಆಗಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ, ಬೆಳ್ತಂಗಡಿ ತಾಲೂಕಿನಿಂದ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತಿ ಹೆಚ್ಚು ಆಜೀವ ಸದಸ್ಯರಾಗಿ ನೋಂದಣಿಯಾಗುವಲ್ಲಿ ಕಾರಣರಾದವರು. ಅಲ್ಲದೆ ತಾಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗೆ ಮಾರ್ಗದರ್ಶನದೊಂದಿಗೆ ಸಹಕಾರ ನೀಡಿದವರು. ಇವರ ಸಾಮಾಜಿಕ ಮತ್ತು ಸಾಹಿತ್ಯಕ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ತಾಲೂಕಿನ ಅಧ್ಯಕ್ಷ ಡಿ. ಯದುಪತಿ ಗೌಡ, ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು, ಕೋಶಾಧ್ಯಕ್ಷ ಡಿ. ಧರ್ಣಪ್ಪ ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ಡಿ ಎ ನಾಗಣ್ಣರವರು ಉಪಸ್ಥಿತರಿದ್ದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!