25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಪನ್ನೀರು ಸಿಂಪಡಿಸಿ ಹೂ ಮತ್ತು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.
ಉಚಿತ ಪಠ್ಯಪುಸ್ತಕ ಮತ್ತು ಉಚಿತ ಸಮವಸ್ತ್ರವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೋಷಕರೊಂದಿಗೆ 2024-25ನೇ ಶೈಕ್ಷಣಿಕ ಸಾಲಿನ ಕಲಿಕಾ ಪ್ರಗತಿಯ ಬಗ್ಗೆ ಹಾಗೂ ಕಲಿಕಾ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಸದಸ್ಯೆ ರೋಹಿಣಿ, ಮುಖ್ಯ ಶಿಕ್ಷಕಿ ದೀಪ ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಹರಿಣಿ ಸ್ವಾಗತಿಸಿದರು.ಮುಖ್ಯ ಶಿಕ್ಷಕಿ ದೀಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿ ಸುಜಾತ ಧನ್ಯವಾದವಿತ್ತರು. ಶಿಕ್ಷಕಿ ಮೇಘ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!