24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ : ಸ. ಉ. ಪ್ರಾ. ಶಾಲೆ ಓಡಿಲ್ನಾಳ. 2024-25 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೆ31 ರಂದು ಅದ್ದೂರಿಯಾಗಿ ನೆರವೇರಿತು.

ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಎಸ್ ಡಿ ಎಮ್ ಸಿ ಉಪಾಧ್ಯಕ್ಷರಾದ ಶಮೀಮಾ ಇವರ ದಿವ್ಯ ಉಪಸ್ಥಿತಿಯಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಆರತಿ ಬೆಳಗಿ, ಪುಷ್ಪಾಚನೆ ಗೈದು ಬ್ಯಾಂಡ್ ವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಮ್ ಸಿ ಅಧ್ಯಕ್ಷರು ಎಲ್ಲಾ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿ ನೀಡಿದರು. ಶೈಕ್ಷಣಿಕ ವರ್ಷದ ಕಲಿಕಾ ಚಟುವಟಿಕೆಗಳಿಗೆ ಶುಭ ಹಾರೈಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಆನಂದಿ, ಎಸ್‌. ಡಿ ಎಂಸಿ ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ ಹಾಗೂ ಅಧ್ಯಾಪಕ ವೃಂದ, ಪೋಷಕರು, ಹಳೆ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

ದೈಹಿಕ ಶಿಕ್ಷಕರಾದ ನಿರಂಜನ್ ಕಾರ್ಯಕ್ರಮ ನಿರೂಪಿಸಿದರು ವಿಲ್ಮೆಂಟ್ ಸೆರಾವೋ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ ಸ್ವಾಗತಿಸಿ ಶಿಕ್ಷಕಿ ಶಾರದಾ ಮಣಿ ಧನ್ಯವಾದವಿತ್ತರು.

Related posts

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
error: Content is protected !!