25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮವು ಜೂ.10ರಂದು ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಸಂಘ ಚಾಲಕ ಡಾ|| ನಾರಾಯಣ ಶೆಣೈ ಮತ್ತು ಮಂಗಳೂರು ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಚಾರ್ಟರ್ಡ್ ಅಕೌಂಟೆಂಟ್ ಕಾರ್ಕಳ ಕಮಲಾಕ್ಷ ಕಾಮತ್, ಬಜಗೋಳಿ ರಾಜ್ಯ ಕೃಷರ್ ಮಾಲಿಕರ ಸಂಘದ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!