25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

ಧರ್ಮಸ್ಥಳ :ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದಲ್ಲಿ ಮೇ 31ರಂದು ಶಾಲಾ ಆರಂಭೋತ್ಸವ ಕಾರ್ಯಕ್ರಮ ಜರಗಿತು.

ಉದ್ಘಾಟಕರಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ ಬಾಲಕೃಷ್ಣ ಪೂಜಾರಿಯವರು ದೀಪ ಪ್ರಜ್ವಲನಗೊಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

” ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಕೇವಲ ಅಂಕಗಳ ಮಾನದಂಡವನ್ನು ಮಾತ್ರ ಪರಿಗಣಿಸದೆ ವಿದ್ಯಾರ್ಥಿಗಳು ಮೈಗೂಡಿಸಿಕೊಂಡಂತಹ ಸಂಸ್ಕಾರಯುತ ಮೌಲ್ಯಗಳನ್ನು ಕೂಡ ಪರಿಗಣಿಸಿ ಅಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮಗಳು ನಡೆಯಬೇಕು” ಮೌಲ್ಯಾಧಾರಿತ ಶಿಕ್ಷಣದ ಮೂಲಕ ಮಾತ್ರ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ ಎಂಬ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಲಾ ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜು ಅವರು ಅಧ್ಯಕ್ಷೀಯ ನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಚಿತವಾಗಿ ವಿತರಿಸಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಅತಿಥಿಗಳು ವಿತರಿಸಿದರು. ಕನ್ನಡ ಶಿಕ್ಷಕರಾದ ಯುವರಾಜರವರು ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ನಿರೂಪಿಸಿ, ಶಿಕ್ಷಕಿ ಶ್ರೀಮತಿ ದಿವ್ಯ ಧನ್ಯವಾದವಿತ್ತರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!