ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸುಮಾರು 26 ವರ್ಷಗಳ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ಮೇ 31ರಂದು ಸರಕಾರಿ ಉದ್ಯೋಗದಿಂದ ನಿವೃತ್ತರಾದ ಚಿದಾನಂದ ಹೂಗಾರ್‌ರವರಿಗೆ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ಮೇ 31ರಂದು ಬೆಳ್ತಂಗಡಿ ಕೃಷಿ ಇಲಾಖೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕೃಷಿ ಇಲಾಖೆಯ ಜಿಲ್ಲಾ ಜಂಟೀ ಕೃಷಿ ನಿರ್ದೇಶಕ ಕೇಂಪೇ ಗೌಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್, ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಹಾವೀರ ಜೈನ್, ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿ ಪಿ.ಕೆ ರಾಜುಪೂಜಾರಿ, ಸಹಾಯಕ ನಿರ್ದೇಶಕ ಪದ್ಮಯ್ಯ ನಾಯಕ್ ಬೆಂಗಳೂರು ಮಾತನಾಡಿ ಶುಭ ಹಾರೈಸಿದರು.
ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ತಿಲಕ್‌ಪ್ರಸಾದ್, ಧರ್ಮರಾಜ್ ಅರಸಿನಮಕ್ಕಿ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಪೂಜಾರಿ, ಪುರಂದರ ಗೌಡ ಕಡೀರ
ದಿನೇಶ್ ಪೊಸಂದೋಡಿ, ಕಂದಾಯ ನಿರೀಕ್ಷಕ ಪವಾಡಪ್ಪ, ಶಿಕ್ಷಕ ಧರಣೇಂದ್ರ ಕೆ. ಜೈನ್, ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಮೊದಲಾದವರು ಮಾತನಾಡಿ, ಚಿದಾನಂದ ಹೂಗಾರ್ ಅವರ ಸೇವಾ ದಕ್ಷತೆ, ಅವರಿಗೆ ಕೃಷಿಕರ ಜೊತೆ ಇದ್ದ ಬಾಂಧವ್ಯದ ಬಗ್ಗೆ ಅನಿಸಿಕೆ
ವ್ಯಕ್ತಪಡಿಸಿದರು. ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಆತ್ಮೀಯವಾಗಿ ಬೀಳ್ಕೋಡಲಾಯಿತು. ಪತ್ನಿ ಪಾರ್ವತಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಿದಾನಂದ ಹೂಗಾರ್ ಅವರ ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್,ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರ