April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ 2024- 25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಮೇ 31 ರಂದು ಆಚರಿಸಲಾಯಿತು.

ಹೊಸದಾಗಿ 8ನೇ ಮತ್ತು 9ನೇ ತರಗತಿಗೆ ದಾಖಲಾದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಆರತಿ ಮಾಡಿ ಹಣೆಗೆ ತಿಲಕವನ್ನು ಇಟ್ಟು ಬರಮಾಡಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ನಮಸ್ಕಾರವನ್ನು ಸಲ್ಲಿಸಿದರು.

ನಂತರ ಸರಸ್ವತಿ ವಂದನೆ ಯೊಂದಿಗೆ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ನಾರಾಯಣ ಫಡ್ಕೆ ವಹಿಸಿದ್ದು ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿ ಸಮಾಜದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ತಮ್ಮ ಗುರಿಯನ್ನು ಮುಟ್ಟಬೇಕು ಇಂದು ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಇವರು ಸ್ವಾಗತಿಸಿ ಶಾಲಾ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಹ ಶಿಕ್ಷಕರಾದ ಸುರೇಶ್ ಎಂ.ಟಿ ಕಾರ್ಯಕ್ರಮವನ್ನು ನಿರ್ವಹಿಸಿ, ಸಹ ಶಿಕ್ಷಕಿ ಶ್ರೀಮತಿ ಪಾರ್ವತಿ ಯು. ಧನ್ಯವಾದವಿತ್ತರು.

ಸಹ ಶಿಕ್ಷಕರಾದ ಆನಂದ ಜಿ. ಗುಣಪಾಲ್ ಎಮ್.ಎಸ್. ಶ್ರೀಮತಿ ಸಹನಾ, ಶ್ರೀಮತಿ ಪದ್ಮಲತಾ, ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಗೀತಾ, ಕಚೇರಿ ಸಿಬ್ಬಂದಿಗಳಾದ ಸೋಮಾವತಿ ಮತ್ತು ಸುಚಿತ್ರ ಎಲ್ಲರೂ ಸೇರಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಿದರು.

Related posts

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!