25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮೇ 31ರಂದು ಆಚರಿಸಲಾಯಿತು.

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿಸಿ ಸಾಂಪ್ರದಾಯಕವಾಗಿ ಆರತಿ ಬೆಳಗಿ ಹಣೆಗೆ ತಿಲಕವನ್ನಿಟ್ಟು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸ್ಮಾರು ವಿಜಯ ಕ್ಲಿನಿಕ್ ಪ್ರಖ್ಯಾತ ವೈದ್ಯರು ಡಾ. ಪ್ರಸಾದ್ ಬಿ ಶೆಟ್ಟಿ, ಹಾಗೂ ಅವರ ಪತ್ನಿ ನಾರಾವಿ ವಿಜಯ ಕ್ಲಿನಿಕ್ ಡಾ. ವಿನೋದ ಹಾಗೂ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು ಮತ್ತು ಇಲಾಖೆಯಿಂದ ಸರಬರಾಜು ಆದ ಪಠ್ಯಪುಸ್ತಕವನ್ನು ವಿತರಿಸಿದರು. ಕಾರ್ಯಕ್ರಮವನ್ನು ಹೇಮಲತಾ ನಿರೂಪಿಸಿದರು. ಚೇತನ ಸ್ವಾಗತಿಸಿದರು ಹಾಗೂ ಉಷಾ ಧನ್ಯವಾದವಿತ್ತರು.

Related posts

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya
error: Content is protected !!