September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಎಂಬ ಆಯುಧದಿಂದ ನಾವು ಜಗತ್ತನ್ನು ಗೆಲ್ಲಬಹುದು. ಇವತ್ತು ಜ್ಞಾನ ಎಂದರೆ ಅಂಕಗಳು ಎಂಬಂತೆ ಕಂಡು ಬರುತ್ತದೆ. ಆದರೆ ಅಂಕಗಳಿಂದ ಅಳತೆ ಮಾಡಲಾಗದ ಎಷ್ಟೋ ಜ್ಞಾನಗಳು ಇಂದು ನಮಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳು ಹಳ್ಳಿಜೀವನಕ್ರಮದಲ್ಲಿ ಕಂಡು ಬರುವ ಜ್ಞಾನವನ್ನು ಹೆಚ್ಚಾಗಿ ಪಡೆದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಆರೋಗ್ಯವಂತ ಸತ್ಪ್ರಜೆಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಮಚಂದ್ರ ದೊಡಮನಿ, ಮೋಹನದಾಸ, ಪ್ರವೀಣ ಕುಮಾರ್ ಹೆಚ್, ಗೀತಾ, ಸುಧಾಕರ ಶೆಟ್ಟಿ ಮತ್ತು ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಪ್ರಸ್ತಾಪನೆಯೊಂದಿಗೆ ಸ್ವಾಗತಿಸಿದರು. ಬೇಬಿ ಕಾರ್ಯಕ್ರಮ ನಿರೂಪಿಸಿದರು. ದೀಪ್ತಿ ಹೆಗ್ಡೆ ವಂದಿಸಿದರು.

ಉಚಿತ ಸಮವಸ್ತ್ರ, ಪುಸ್ತಕ ವಿತರಿಸಲಾಯಿತು. ಬಳಿಕ ಸಿಹಿಯೂಟ ನೀಡಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

Related posts

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
error: Content is protected !!