25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಗಳು ಹಾಗೂ ಈ ಕ್ಷೇತ್ರದ ಧರ್ಮೋಥಾನಾ ಟ್ರಸ್ಟ್ ನ ಕಾರ್ಯದರ್ಶಿಗಳಾದ ವೀರು ಶೆಟ್ಟಿ ಅವರ ಆಗಮಿಸಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಟಿಕೆ ಸಾಮಾನುಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡರು. ನಂತರ ಶಾಲಾ ಪ್ರಾರಂಭೋತ್ಸವವನ್ನು ದಿವ್ಯ ಹಸ್ತದಿಂದ ದೀಪ ಪ್ರಜ್ವಲನ ಮಾಡುವುದರ ಮೂಲಕ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡುವುದರ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಈ ವರ್ಷ ಎಲ್ಲ ವಿದ್ಯಾರ್ಥಿಗಳು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಲಿತು ಶಾಲೆಗೆ ಒಳ್ಳೆಯ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠ ಪ್ರವಚನಗಳನ್ನು ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಪುನರಾವರ್ತನೆಗೊಳಿಸಿದಾಗ ಮಗುವಿನ ಕಲಿಕಾ ಮಟ್ಟ ಇನ್ನಷ್ಟು ಹೆಚ್ಚಾಗಲು ಸಾಧ್ಯವಿದೆ. ಪೂಜ್ಯ ಖಾವಂದರು ಈ ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸವಲತ್ತು ಗಳನ್ನು ಒದಗಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ,ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಗೆ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ವಿದ್ಯಾರ್ಥಿಗಳೆಲ್ಲರೂ ಕೂಡ ಆಟ ಪಾಠಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತರುವಂತಹ ವಿದ್ಯಾರ್ಥಿಗಳಾಗಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ನಿವೃತ್ತ ಮುಖ್ಯ ಶಿಕ್ಷಕ ಜಿ. ಶ್ರೀಧರನ್ ನಾಯರ್ ಅವರು ಶಾಲೆಯ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.


ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲೆಯ ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.


ವೀರು ಶೆಟ್ಟಿ ರವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿಯನ್ನು ನೀಡಿದರು. ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ರವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು ಸಹಕರಿಸಿದರು.

Related posts

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya
error: Content is protected !!