37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ವಿಭಾಗದ ಸರಕಾರಿ/ ಅನುದಾನಿತ/ಅನುದಾನ ರಹಿತ ಉಪನ್ಯಾಸಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಮೇ 30 ರಂದು ಕೆನರಾ ಪದವಿ ಕಾಲೇಜು, ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆಯಿತು.

ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಕಾರ್ಯಕ್ರಮವನ್ನು ಉದ್ದೇಶಿಸಿ ರಜೆಯಲ್ಲಿಯೂ ತಮ್ಮ ಸಮಯವನ್ನು ಬಿಡುವುಗೊಳಿಸಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿ ಜಿಲ್ಲೆಯ ದ್ವಿತೀಯ ಪಿಯುಸಿಯ ಫಲಿತಾಂಶ ಉನ್ನತ ಮಟ್ಟಕ್ಕೆ ಏರಿಕೆಗೆ ಇವರೆ ಕಾರಣ ಎಂದರು.

ಮಂಗಳೂರು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣರವರು ಇಂಥ ಕಾರ್ಯಗಾರದಿಂದ ಉಪನ್ಯಾಸಕರು ತಮ್ಮ ವಿಷಯದ ಬಗ್ಗೆ ಸಂಪೂರ್ಣ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾಮಹೇಶ್ವರಿ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಕೆ ಕೆನರಾ ಪದವಿ ಕಾಲೇಜು, ಮಂಗಳೂರು ಉಪಸ್ಥಿತರಿದ್ದು ಕಾರ್ಯಗಾರದ ಪ್ರಾಮುಖ್ಯತೆಯನ್ನು ತಿಳಿಸಿ ಕಾರ್ಯಗಾರಕ್ಕೆ ಶುಭ ಹಾರೈಸಿದರು.

ತರಬೇತಿ ಕಾರ್ಯಾಗಾರದಲ್ಲಿ ಎಲ್ಲಾ ಗಣಕವಿಜ್ಞಾನ ಉಪನ್ಯಾಸಕರು ಭಾಗವಹಿಸಿದ್ದರು. ಸಂಘದ ವತಿಯಿಂದ ಅತಿಥಿಗಳಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.

ಪ್ರದೀಪ್ ಕೆ ವೈ ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಸುಮಾ ಶೆಟ್ಟಿ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya
error: Content is protected !!