23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಲಾಯಿತು.

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ಶಾಲಾ ಎಸ್‌ಡಿಎಂಸಿ ಸದಸ್ಯರು ವಿತರಿಸಿದರು. 2024-25ರ ಶೈಕ್ಷಣಿಕ ಬಲವರ್ಧನೆ ವರ್ಷದ ರೂಪುರೇಷೆಗಳನ್ನು ಪೋಷಕರಿಗೆ ತಿಳಿಯಪಡಿಸಿದರು.
ಶಾಲಾ ಶಿಕ್ಷಕ ದೇವುದಾಸ್ ನಾಯಕ್ ಶಾಲಾ ಶಿಸ್ತು, ಸಮವಸ್ತ್ರ ಮತ್ತು ಹತ್ತನೇ ತರಗತಿಯ ವಿಶೇಷ ತರಗತಿಗಳ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯಶಿಕ್ಷಕ ಶಶಿಧರ್ ಕೆ. ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ವಂದಿಸಿದರು. ಶಿಕ್ಷಕಿ ಶ್ರೀಮತಿ ಸೌಮ್ಯ ನಿರೂಪಿಸಿದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya
error: Content is protected !!