24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು..

ಹೊಸದಾಗಿ ದಾಖಲಾದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಳೆದ ಸಾಲಿನಲ್ಲಿ ಉತ್ತೀರ್ಣರಾದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್, SDMC ಅಧ್ಯಕ್ಷ ಪುರುಷೋತ್ತಮ ಗೌಡ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಶಾಂತಾ ರವರು ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿ ಶಾಲೆಯ ನೀತಿ ನಿಯಮಗಳನ್ನು ತಿಳಿಸಿದರು.

SDMC ಸದಸ್ಯರು, ಸಹ ಶಿಕ್ಷಕರು ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಶೋಲಿ ಇವರು ಸ್ವಾಗತಿಸಿ, ಶರತ್ ರವರು ವಂದಿಸಿದ ಈ ಕಾರ್ಯಕ್ರಮವನ್ನು ಶ್ರೀಮತಿ ಸುಚಿತ್ರ ಇವರು ನಿರ್ವಹಿಸಿದರು. ಮಧ್ಯಾಹ್ನದ ಊಟಕ್ಕೆ ಸಿಹಿ ಪಾಯಸವನ್ನು ಶ್ರೀ ವಿನಾಯಕ ಜೋಶಿ ಇವರು ನೀಡಿದ್ದರು.

Related posts

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!