ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.
ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.
ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.