26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮೇ 31ರಂದು ಆಚರಿಸಲಾಯಿತು.

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿಸಿ ಸಾಂಪ್ರದಾಯಕವಾಗಿ ಆರತಿ ಬೆಳಗಿ ಹಣೆಗೆ ತಿಲಕವನ್ನಿಟ್ಟು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸ್ಮಾರು ವಿಜಯ ಕ್ಲಿನಿಕ್ ಪ್ರಖ್ಯಾತ ವೈದ್ಯರು ಡಾ. ಪ್ರಸಾದ್ ಬಿ ಶೆಟ್ಟಿ, ಹಾಗೂ ಅವರ ಪತ್ನಿ ನಾರಾವಿ ವಿಜಯ ಕ್ಲಿನಿಕ್ ಡಾ. ವಿನೋದ ಹಾಗೂ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು ಮತ್ತು ಇಲಾಖೆಯಿಂದ ಸರಬರಾಜು ಆದ ಪಠ್ಯಪುಸ್ತಕವನ್ನು ವಿತರಿಸಿದರು. ಕಾರ್ಯಕ್ರಮವನ್ನು ಹೇಮಲತಾ ನಿರೂಪಿಸಿದರು. ಚೇತನ ಸ್ವಾಗತಿಸಿದರು ಹಾಗೂ ಉಷಾ ಧನ್ಯವಾದವಿತ್ತರು.

Related posts

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ