ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಮೇ 31ರಂದು ಅದ್ದೂರಿಯಾಗಿ ನೆರವೇರಿಸಲಾಯಿತು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ವಹಿಸಿದ್ದರು.
ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಆರತಿ ಬೆಳಗಿ ಬ್ಯಾಂಡ್ ವಾದ್ಯದೊಂದಿಗೆ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳೊಂದಿಗೆ ರಾಮಕೃಷ್ಣ ನಾಯಕ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸೇರ್ಪಡೆಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ನೀಡಿ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ ರಾಮಕೃಷ್ಣ ನಾಯಕ್ ಗುರುವಾಯನಕೆರೆ, ಹಿರಿಯ ವಿದ್ಯಾರ್ಥಿ ಕೊಡುಗೈ ದಾನಿ ಹೇಮಂತ ರಾವ್ ಎರ್ಡೂರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ಶಾಲಾ ನಾಮನಿರ್ದೇಶಿತ ಸದಸ್ಯ ಗಣೇಶ್ ಉಪಸ್ಥಿತರಿದ್ದರು.
ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಹೇಮಂತ ರಾವ್ ಎರ್ಡೂರ್ ಎಲ್ಲರಿಗೂ ಸಿಹಿ ತಿನಿಸಿನ ವ್ಯವಸ್ಥೆಯನ್ನು ಮಾಡಿದರು. ಸರಕಾರದಿಂದ ನೀಡಲಾದ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಎನ್. ಸ್ವಾಗತಿಸಿದರು. ಶಿಕ್ಷಕಿಯರಾದ ಶ್ರೀಮತಿ ವೇರೋನಿಕಾ ಕಾರ್ಯಕ್ರಮ ನಿರೂಪಿಸಿದರು. ಸಿಸಿಲಿಯಾ ವಂದಿಸಿದರು. ರಾಜೇಶ್ವರಿ, ಅನಸೂಯ, ಅಪ್ಸ, ವಿಶಾಲ, ಶೀಭಾ ಮತ್ತು ಆರತಿ ಕಾರ್ಯಕ್ರಮಕ್ಕೆ ಸಹಕರಿಸಿದರು.