ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸುದೀರ್ಘ 40 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ.

ಧರ್ಮಸ್ಥಳದ ಮೋಹನ್ ರಾವ್ ಪಡ್ಡೆಟ್ನಾಯ – ಸುಮತಿ ಪಡ್ಡೆಟ್ನಾಯ ದಂಪತಿಯ ಮೂರನೇ ಪುತ್ರರಾಗಿ ಜನಿಸಿದ ಸುಬ್ರಹ್ಮಣ್ಯ ರಾವ್, ಉಜಿರೆಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ, ಮಡಿಕೇರಿಯ ಶ್ರೀ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶಿಕ್ಷಕ ತರಬೇತಿ ಪೂರೈಸಿದ್ದರು.

ಇವರ ತಂದೆ ಉಜಿರೆಯ ಧ.ಮಂ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದು, ಅವರ ಅಕಾಲಿಕ ನಿಧನದ ಬಳಿಕ 1984ರಲ್ಲಿ ಅದೇ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಧರ್ಮಸ್ಥಳ ಧ.ಮಂ. ಅ.ಹಿ.ಪ್ರಾ. ಶಾಲೆ ಮತ್ತು ಪುದುವೆಟ್ಟು ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ 23 ವರ್ಷಗಳಿಂದ ಸಹಶಿಕ್ಷಕರಾಗಿ, 6 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಇವರು ಯೋಗ ಶಿಕ್ಷಕರಾಗಿ, ತಾಲೂಕು ಯೋಗ ಸಂಘಟಕ, ನೃತ್ಯ ಗುರು, ನಾಟಕ ತರಬೇತುದಾರರಾಗಿಯೂ ಹೆಸರು ಮಾಡಿದ್ದಾರೆ. ಪ್ರತಿಭಾ ಕಾರಂಜಿಯ ಕೋಲಾಟ ಸ್ಪರ್ಧೆಗೆ ಮಕ್ಕಳನ್ನು ಅಣಿಗೊಳಿಸಿ, ತಂಡವನ್ನು 6 ಬಾರಿ ಜಿಲ್ಲಾ ಮಟ್ಟಕ್ಕೆ ಹಾಗೂ 5 ಬಾರಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಗೊಳಿಸುವಲ್ಲಿ ಶ್ರಮಿಸಿದ್ದರು. ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿಯಾಗಿದ್ದು, ಇದೀಗ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!