April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2024-25 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ಮೇ 31ರಂದು ನಡೆಯಿತು.

ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ ವೃಂದವು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಬಣ್ಣ ಕಾಗದಗಳಿಂದ ಅಲಂಕರಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ವಿದ್ಯಾರ್ಥಿಗಳ ಪೋಷಕರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಶೈಕ್ಷಣಿಕ ವರ್ಷವನ್ನು ಶುಭಾರಂಭ ಮಾಡಿದರು.

ವಿದ್ಯಾರ್ಥಿಗಳಿಗೆ ತರಗತಿ ಕೋಣೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಯಿತು ಹಾಗೂ ಕಿಂಡರ್ರ್ಗಾರ್ಟನ್ ಹಾಗೂ ಒಂದನೇ ತರಗತಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ವಿಶೇಷವಾಗಿ ಆರತಿ ಬೆಳಗಿ ಶುಭಾಶಯ ಪತ್ರದೊಂದಿಗೆ ತಮ್ಮ ಶಾಲಾ ಜೀವನದ ಮೊದಲನೇ ದಿನಕ್ಕೆ ಸ್ವಾಗತಿಸಲಾಯಿತು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!