April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ.

ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ ಕೇವಲ 125ರಿಂದ 150ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂಬುದು ಎಲ್ಲ ಸಮೀಕ್ಷೆಗಳ ಬಹುತೇಕ ಸಾರಾಂಶವಾಗಿದೆ. ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362- 392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು 10-20 ಸ್ಥಾನ ಗಳಿಸಲಿದ್ದಾರೆ.

ರಿಪಬ್ಲಿಕ್ ಭಾರತ್-ಮ್ಯಾಟ್ರಿಝ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 353-368 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 118-133 ಸ್ಥಾನಕ್ಕಷ್ಟೆ ಸೀಮಿತವಾಗಲಿದೆ. ಇತರರು 43- 48 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ.ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 359 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ ಕೇವಲ 154 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಇತರರು 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.ಈ ನಾಲ್ಕು ಸಮೀಕ್ಷೆಗಳ ಸರಾಸರಿ ಆಧಾರದಲ್ಲಿ ಎನ್‌ಡಿಎ 350ಕ್ಕಿಂತ ಹೆಚ್ಚು ಹಾಗೂ ಇಂಡಿಯಾ ಮೈತ್ರಿಕೂಟ 125-150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ‘ಪೋಲ್ ಆಫ್ 4 ಎಕ್ಸಿಟ್ ಪೋಲ್ಸ್ ಅಂದಾಜಿಸಿದೆ. ಉಳಿದ ಸಮೀಕ್ಷೆಗಳೂ ಇದರಿಂದ ಭಿನ್ನವಾಗಿಲ್ಲ

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!