April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ವನ್ನು ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ದಾಖಲಾದ ಮಕ್ಕಳನ್ನು ಹೂ, ಬಲೂನ್ ಗಳನ್ನು ನೀಡಿ ಸ್ವಾಗತಿಸಲಾಯಿತು.

ಶಾಲಾ ಮಕ್ಕಳನ್ನು ಪುಷ್ಪಾರ್ಚನೆ ಮೂಲಕ ಬರಮಾಡಿಕೊಳ್ಳಲಾಯಿತು.SDMC ಅಧ್ಯಕ್ಷರಾದ ಶ್ರೀಯುತ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.SDMC ಉಪಾಧ್ಯಕ್ಷ ರಾದ ಶ್ರೀಮತಿ ಶೋಭಾ, ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, SDMCಸದಸ್ಯರು,ಪೋಷಕರು, ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ರಿಜಾ ಫಾತಿಮಾಳ ದೇವತಾ ಸ್ತುತಿಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.ಸಹಶಿಕ್ಷಕಿ ರೀಟಾ ರೊಡ್ರಿಗಸ್ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡ ಮಾಡಿರುವ 2 ಜೊತೆ ಸಮವಸ್ತ್ರ, ಪಠ್ಯಪುಸ್ತಕ ಗಳನ್ನು ವಿತರಿಸಿ ಶುಭ ಹಾರೈಸಲಾಯಿತು.TGT ಶಿಕ್ಷಕರಾದ ರಶ್ಮಿ ಯವರು ಪೋಷಕರಿಗೆ ಶಾಲಾ ನಿಯಮಗಳು, ಮಕ್ಕಳ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.GPT ಶಿಕ್ಷಕರಾದ ಶಬನಬಾನು ರವರು ನಿರೂಪಿಸಿದ ಕಾರ್ಯಕ್ರಮ ದಿಲ್ಲಿ ಸಹಶಿಕ್ಷಕಿ ಪದ್ಮಾವತಿ ಯವರು ಧನ್ಯವಾದ ಗೈದರು.ಮಕ್ಕಳಿಗೆ ಸಿಹಿಯೂಟವನ್ನು ನೀಡಲಾಯಿತು.

Related posts

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!