25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಧರ್ಮಸ್ಥಳ ಪ್ರಾಥಮಿಕವಾಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ, ಧನಲಕ್ಷ್ಮಿ ಜನಾರ್ಧನ್,ಪ್ರಭಾಕರ ಗೌಡ ಬೊಳ್ಮ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ,ತಂಗಚ್ಚನ್ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Related posts

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!