30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶುಭ ಹಾರೈಸಿದರು.


ಹೊಸದಾಗಿ ಸೇರಿದ ಮಕ್ಕಳಿಗೆ ಪನ್ನೀರು ಹಾಕಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು. ಮಕ್ಕಳಿಗೆ ಪುಸ್ತಕ, ಬಳಪ, ಸ್ಲೇಟು ಕೊಟ್ಟು ಬರಮಾಡಿಕೊಳ್ಳಲಾಯಿತು.


ಶಾಲಾ ಮುಖ್ಯ ಗುರುಗಳಾದ ಪಿ.ಸುಬ್ರಹ್ಮಣ್ಯ ರಾವ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಯಂಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕ ವೃoದ ದದವರು ಸಹಕಾರವಿತ್ತರು.

Related posts

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!