September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.

ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.

ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.

ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಇಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಆರತಿ ಉಪಸ್ಥಿತಿರಿದ್ದರು.

ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯಪ್ರಾಥಮಿಕ ಶಾಲೆ 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆ

Suddi Udaya
error: Content is protected !!