April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

ವೇಣೂರು : ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು , ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವೇಣೂರು ಇದರ ವತಿಯಿಂದ ಬೆಳ್ತಂಗಡಿಯ ಜನಪ್ರಿಯ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿ ನಮನ ಕಾರ್ಯಕ್ರಮ ವೇಣೂರು ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಜಯರಾಮ ಶೆಟ್ಟಿ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು.

ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ಇದರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಬಂಗೇರರು ತನ್ನ ಜೀವನದ ಉದ್ದಕ್ಕೂ ಬಡವರ ಏಳಿಗೆಯನ್ನು ಬಯಸಿದವರು ಎಂದರು.

ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಗುಣಪ್ರಸಾದ್ ಕಾರಂದೂರು ,ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಭಾಕರ ಹೆಗ್ಡೆ ಹಟ್ಟಾಜೆ ಗುತ್ತು, ಹಿರಿಯರಾದ ಮಹಮ್ಮದ್ ಸಾಹೇಬ್, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಸಾದ್ ಎಂ ಕೆ , ಆರಾಧನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಭಟ್,ಗ್ರಾಮ ಪಂ ಸದಸ್ಯರಾದ ಅನೂಪ್ ಜೆ ಪಾಯಸ್ , ಹರೀಶ್ ಪಿ ಎಸ್ , ಸುನೀಲ್ ಬಜಿರೆ, ಸುರೇಶ್ ಅಂಡಿಂಜೆ, ಪ್ರಮುಖರಾದ ವಿಶ್ವನಾಥ ದಡ್ಡಲ್ ಪಲ್ಕೆ, ವಿಕ್ಟರ್, ರಮೇಶ್ ಪಡ್ಡಾಯಿಮಜಲು, ದಯಾನಂದ ದೇವಾಡಿಗ, ಸತೀಶ್ ಉಜಿರ್ದಡ್ಡ, ಸತೀಶ್ ಕಜಿಪಟ್ಟ, ನವೀನ್ ಪಚೇರಿ, ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ.ಗು.ನಾ.ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿ, ವೇಣೂರು ಶ್ರೀ.ಗು.ನಾ.ಸ್ವಾ. ಸೇ.ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ನಿರೂಪಿಸಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ನಿರ್ದೇಶಕ ಅರುಣ್ ಕೋಟ್ಯಾನ್ ವಂದಿಸಿದರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!