32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಧರ್ಮಸ್ಥಳ ಪ್ರಾಥಮಿಕವಾಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ, ಧನಲಕ್ಷ್ಮಿ ಜನಾರ್ಧನ್,ಪ್ರಭಾಕರ ಗೌಡ ಬೊಳ್ಮ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ,ತಂಗಚ್ಚನ್ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Related posts

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!