23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ ಮಾತನಾಡಿ; ಸಂಜೀವ ನಾಯ್ಕರ ನಿವೃತ್ತ ಜೀವನ ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿವರ್ಗದವರು ಹಾಗೂ ತಾಲೂಕು ಪಂಚಾಯತ್‌ನ ಸಿಬ್ಬಂದಿಗಳು ಈ ಸರಳ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ನಾರಾವಿ ಗ್ರಾಮ ಪಂಚಾಯತ್‌ನ ಸುಧಾಕ‌ರ್ ಮಾತನಾಡಿ ಸಂಜೀವ ನಾಯ್ಕರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ ವ್ಯವಸ್ಥಾಪಕ ಪ್ರಶಾಂತ್‌ ಹಾಗೂ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ ನೊಚ್ಚ ಮಾತನಾಡಿ ಸಂಜೀವ ನಾಯ್ಕರೊಂದಿಗಿನ ವೃತ್ತಿ ಜೀವನದ ಒಡನಾಟವನ್ನು ಮೆಲುಕು ಹಾಕಿದರಲ್ಲದೇ; ನಿವೃತ್ತ ಜೀವನಕ್ಕೆ ಶುಭಕಾಮನೆಗಳನ್ನು ಸಲ್ಲಿಸಿದರು. ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನಿವೃತ್ತ ಸಂಜೀವ ನಾಯ್ಕರಿಗೆ ನೆರಿಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸುಮಾ ಶುಭ ಹಾರೈಸಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಸಫಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!