September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ ಮಾತನಾಡಿ; ಸಂಜೀವ ನಾಯ್ಕರ ನಿವೃತ್ತ ಜೀವನ ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿವರ್ಗದವರು ಹಾಗೂ ತಾಲೂಕು ಪಂಚಾಯತ್‌ನ ಸಿಬ್ಬಂದಿಗಳು ಈ ಸರಳ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ನಾರಾವಿ ಗ್ರಾಮ ಪಂಚಾಯತ್‌ನ ಸುಧಾಕ‌ರ್ ಮಾತನಾಡಿ ಸಂಜೀವ ನಾಯ್ಕರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ ವ್ಯವಸ್ಥಾಪಕ ಪ್ರಶಾಂತ್‌ ಹಾಗೂ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ ನೊಚ್ಚ ಮಾತನಾಡಿ ಸಂಜೀವ ನಾಯ್ಕರೊಂದಿಗಿನ ವೃತ್ತಿ ಜೀವನದ ಒಡನಾಟವನ್ನು ಮೆಲುಕು ಹಾಕಿದರಲ್ಲದೇ; ನಿವೃತ್ತ ಜೀವನಕ್ಕೆ ಶುಭಕಾಮನೆಗಳನ್ನು ಸಲ್ಲಿಸಿದರು. ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನಿವೃತ್ತ ಸಂಜೀವ ನಾಯ್ಕರಿಗೆ ನೆರಿಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸುಮಾ ಶುಭ ಹಾರೈಸಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಸಫಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಬೆಸ್ಟ್ ಎಂಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
error: Content is protected !!