23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

ಬೆಳ್ತಂಗಡಿ : ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ಕತ್ತಿ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಪ್ರಕರಣ ಜೂ.1ರಂದು ವರದಿಯಾಗಿದೆ.

ಕರಾಯ ಸಿರಾಜ್‌ ಎಂಬಾತನು ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್‌ ಎಂಬಾತನು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜೂ. 1 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಐ ಉದಯರವಿ ವೈ ಎಂ ರವರು ಹಾಗೂ ಸಿಬ್ಬಂದಿಗಳು, ಆರೋಪಿ ಅಶ್ರಫ್ ಎಂಬಾತನ ಮನೆಯ ಬಳಿ ತೆರಳಿದಾಗ, KA05Z1833ನೇ ವಾಹನದಿಂದ ಜಾನುವಾರುಗಳನ್ನು ಇಳಿಸುತ್ತಿದ್ದ ಆರೋಪಿತನು ಪೊಲೀಸ್ ರನ್ನು ಕಂಡು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ.

ಪೊಲೀಸರು ಸ್ಥಳದಲ್ಲಿದ್ದ ಎರಡು ಜಾನುವಾರುಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ವಾಹವನ್ನು ಮತ್ತು ವಾಹನದಲ್ಲಿದ್ದ ಮೊಬೈಲ್‍ನ್ನು ಸ್ವಾದೀನಪಡಿಸಿಕೊಂಡಿದ್ದಾರೆ.. ಬಳಿಕ ಸದ್ರಿ ಸ್ಥಳದ ಹತ್ತಿರದಲ್ಲಿಯೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿದ್ದ, ಸಿರಾಜ್ ಎಂಬಾತನ ಮನೆಯ ಬಳಿ ತೆರಳಿದಾಗ ಸ್ಥಳದಲ್ಲಿದ್ದ ಕರಾಯದ ಸಿರಾಜ್‍ ಹಾಗೂ ಇನ್ನೊಬ್ಬ ಆರೋಪಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆತನ ಮನೆಯ ಹಿಂಭಾಗದ ಶೆಡ್ ನಲ್ಲಿ, ಜಾನುವಾರಿನ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿ ಕತ್ತಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದೆ.

ಸದರಿ ಸೊತ್ತುಗಳನ್ನು ಸ್ವಾದೀನಪಡಿಸಿಕೊಂಡು, ಆರೋಪಿತರಾದ ಅಶ್ರಫ್, ಪಲ್ಕೆ ಮನೆ, ಪುತ್ತಿಲ ಗ್ರಾಮ, ಮತ್ತು ಸಿರಾಜ್‌ ಕರಾಯ ಹಾಗೂ ಇತರರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ, ಅ.ಕ್ರ 38/2024 ಕಲಂ: 4,5,7,12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 & ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ ಕಾಯ್ದೆ 1960 & ಕಲಂ: 66 ಜೊತೆಗೆ 192(ಎ) ಐಎಂವಿ ಆಕ್ಟ್‌, ಕಲಂ: 53(1) ಜೊತೆಗೆ 192 ಐಎಂವಿ ಆಕ್ಟ್‌ ಹಾಗೂ ಕಲಂ: 379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!