28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಷಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

Related posts

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!