30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ.

ನೈರುತ್ಯ ಪದವಿಧರ ಕ್ಷೇತ್ರದಲ್ಲಿ 10 ಮಂದಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 1543 ಮತದಾರಿದ್ದು, ಬೆಳ್ತಂಗಡಿ ಆಡಳಿತ ಸೌಧದ ಎರಡು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 878 ಮತದಾರರಿದ್ದು, ಆಡಳಿತ ಸೌಧದ ಒಂದು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.

ನೈರುತ್ಯ ಪದವಿಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಹಾಗೂ ಕಾಂಗ್ರೆಸ್‌ನಿಂದ ಆಯಾನೂರು ಮಂಜುನಾಥ್ ಅಭ್ಯರ್ಥಿಗಳಾಗಿದ್ದು, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಾಕಣದಲ್ಲಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಭೋಜೇ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಕೆ.ಕೆ ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಪತ್ನಿ ಡಾ| ಸ್ವೀಕೃತ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಸೇರಿದಂತೆ ಪವಿಧರರು ಹಾಗೂ ಶಿಕ್ಷಕ ಕ್ಷೇತ್ರದ ಮತದಾರರು ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದರು.

Related posts

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!