May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲಾ ಸದಸ್ಯರ ಊರವರ ಸಹಕಾರದೊಂದಿಗೆ ನಡೆಸಲಾಯಿತು.

ಶ್ರೀ ಲಕ್ಷೀ ಜನಾರ್ಧನ ಕುಣಿತ ಭಜನಾ ಮಂಡಳಿಯ ಮಕ್ಕಳಿಂದ ಕುಣಿತ ಭಜನೆಯನ್ನು ಸಮಿತಿ ಅಧ್ಯಕ್ಷರು ಗಿರಿರಾಜ ಬಾರಿತ್ತಾಯರವರು ಮತ್ತು ಒಕ್ಕೂಟದ ಪದಾಧಿಕಾರಿಗಳು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಇಳಂತಿಲ ಪಂಚಾಯತ್‌ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಂಜೀವ ನಾಯ್ಕ್ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲೋಕಯ್ಯ ನಾಯ್ಕ್ ರವರಿಗೆ ವಿಶೇಷವಾಗಿ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೋಕೆಸ್ತಾ ಶರತ್‌ಕೃಷ್ಣ ಪಡ್ವೆಟ್ನಾಯ, ಪೂಜಾ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಸುರೇಂದ್ರ, ವಲಯ ಮೇಲ್ವಿಚಾರಕರು, ಒಕ್ಕೂಟದ ನೂತನ ನಿಕಟ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya
error: Content is protected !!