April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ನೆರವೇರಿಸಿ, ಮನೆ ಮನೆ ಭಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವಾರದ ಭಜನೆಯನ್ನು ನಿರ್ದಿಷ್ಟ ದಿನದಂದು ಮಾಡುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳು ನಡೆಯಬೇಕು. ಖಾವಂದರ ಆಶಯದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಮುಖಾಂತರ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಭಜನೆಯು ಧನಾತ್ಮಕ ಚಿಂತನೆಗಳೆಡೆಗೆ ಕೊಂಡೊಯ್ಯುವ ಸಾಧನವಾಗಿದೆ ಎಂದು ಮಾಹಿತಿ ನೀಡಿದರು.

ಯೋಜನಾಧಿಕಾರಿ ದಯಾನಂದ ಪೂಜಾರಿ, ಸಂಪನ್ಮೂಲ ವ್ಯಕ್ತಿಯಾದ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಹಾಗೂ ಭಜನಾ ತರಬೇತುದಾರ ಸಂದೇಶ್, ವಲಯದ ಭಜಕರು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಗರ್ಡಾಡಿ ವಲಯ ಭಜನಾ ಪರಿಷತ್‌ನ ನೂತನ ಅಧ್ಯಕ್ಷರಾಗಿ ಶಿವಪ್ರಸಾದ್, ಉಪಾಧ್ಯಕ್ಷರಾಗಿ ಜಯರಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ಸಂದೇಶ್ ಮದ್ದಡ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಬುಳೆಕಾರ, ಕೋಶಾಧಿಕಾರಿಯಾಗಿ ಪ್ರಕಾಶ್ ಪೆರ್ಮುಡ, ಸದಸ್ಯರುಗಳಾಗಿ ಚೈತನ್ಯ ಹಾಗೂ ಚೇತನ್ ಆಯ್ಕೆಯಾದರು.

ವಲಯ ಮೇಲ್ವಿಚಾರಕಿ ಶ್ರೀಮತಿ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು: ಮೋನಮ್ಮ ನಿಧನ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!