22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya
error: Content is protected !!